ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕಾರ್ಯತಂತ್ರ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷೆ ಮಂಜುಳಾ ನಾಯ್ಡು
ಬೆಂಗಳೂರು, ಮಾ.೭: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸಲಿರುವ ಮಹಿಳೆಯರು ಸೇರಿದಂತೆ ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷೆ ಮಂಜುಳಾ ನಾಯ್ಡು ಹೇಳಿದ್ದಾರೆ.
ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ಪಕ್ಷ ಹೆಚ್ಚಿನ ಸ್ಥಾನ ಪಡೆಯುವಂತೆ ಮಾಡಲು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರೊಂದಿಗೆ ಚರ್ಚಿಸಿ ಕಾರ್ಯತಂತ್ರ ರೂಪಿಸಲಾಗುವುದು ಎಂದರು.
ಸಂಸತ್‌ನಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಮಸೂದೆ ಮಂಡನೆಯಾಗಿದೆ. ಈ ಮಸೂದೆ ಶೀಘ್ರದಲ್ಲೆ ಜಾರಿಯಾಗಲಿದೆ. ಇದರಿಂದ ಬಿಬಿಎಂಪಿ ಚುನಾವಣೆಯಲ್ಲಿ ೧೯೮ ವಾರ್ಡ್‌ಗಳ ಪೈಕಿ ೬೬ ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಮಹಿಳೆಯರಿಗೆ ಅವಕಾಶ ಸಿಗಲಿದೆ. ಈ ೬೬ ಸ್ಥಾನಗಳಲ್ಲೂ ಪಕ್ಷದಿಂದ ಸ್ಪರ್ಧಿಸಲಿರುವ ಮಹಿಳಾ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಾಗುವುದು ಎಂದು ನಾಯ್ಡು ತಿಳಿಸಿದರು.
ರಾಜ್ಯ ಬಿಜೆಪಿ ಸರಕಾರದ ಆಡಳಿತದಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನತೆ ಬೇಸರಗೊಂಡಿದ್ದಾರೆ. ಕೇವಲ ಹುಸಿ ಭರವಸೆಗಳನ್ನು ನೀಡುತ್ತಾ ಕಾಲ ಕಳೆಯುತ್ತಿರುವ ಬಿಜೆಪಿಗೆ ಬಿಬಿಎಂಪಿ ಚುನಾವಣೆಯಲ್ಲಿ ನಗರದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನಾಯ್ಡು ನುಡಿದರು.
ರಾಜ್ಯ ಬಿಜೆಪಿ ಸರಕಾರ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗಿತ್ತಿದೆಯೆ ಹೊರತು, ಯಾವುದೆ ಹೊಸ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿಲ್ಲ ಎಂದು ಅವರು ಆರೋಪಿಸಿದರು.
ಬಿಬಿಎಂಪಿ ಚುನಾವಣೆಗೆ ಪಕ್ಷದಿಂದ ಸಿದ್ಧಪಡಿಸುವ ಪ್ರಣಾಲಿಕೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಾಯ್ಡು ಹೇಳಿದರು.
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದುವರಿದಿದ್ದಾರೆ. ಆದರೆ ಇಂದಿಗೂ ಗ್ರಾಮೀಣ ಪ್ರದೇಶದ ಮಹಿಳೆಯ ಪರಿಸ್ಥಿತಿಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಪಕ್ಷದ ಮಹಿಳಾ ಘಟಕದ ವತಿಯಿಂದ ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಜಾಗೃತಿ, ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಮೂಲಕ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ನನಗೆ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಸರ್ಮರ್ಥವಾಗಿ ನಿಭಾಯಿಸುತ್ತೇನೆ ಎಂದು ನಾಯ್ಡು ಹೇಳಿದರು.
ಇಂದು ಪದಗ್ರಹಣ: ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಮಂಜುಳಾನಾಯ್ಡು ಮಾ.೮ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಪಕ್ಷದ ಕೇಂದ್ರ ಕಚೇರಿಯ ಆವರಣದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿರುವ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುವರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್‌ನ ಮುಖಂಡೆ ನಫಿಸಾ ಫಾತಿಮಾ, ಭಾರತಿ ಶಂಕರ್, ಮಾಗಡಿ ಕಮಲಮ್ಮ ಮುಂತಾದವರು ಉಪಸ್ಥಿತರಿದ್ದರು.

Rate this article

del.icio.us
Digg
Comments (0 posted):
Post your comment